alex Certify ಅಕ್ಟೋಬರ್‌ 13ರಂದು ‘ಪುಷ್ಪ’ ಸಿನಿಮಾದ ಎರಡನೇ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 13ರಂದು ‘ಪುಷ್ಪ’ ಸಿನಿಮಾದ ಎರಡನೇ ಹಾಡು ರಿಲೀಸ್

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಸುಕುಮಾರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ.

ಈ ಚಿತ್ರದ ಮೊದಲನೇ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು. ಕನ್ನಡ ವರ್ಷನ್ ನಲ್ಲಿ ಸ್ಯಾಂಡಲ್ ವುಡ್ ನ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಗೂಡಿಸಿದ್ದರು.

ಅಲ್ಲು ಅರ್ಜುನ್ ಅವರ ಇಂಟ್ರಡಕ್ಷನ್ ಹಾಡಾಗಿತ್ತು. ಇದೀಗ ಮತ್ತೊಂದು ಲಿರಿಕಲ್ ಸಾಂಗ್ ರಿಲೀಸ್ ಆಗಲಿದೆ. 5 ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಲಿದೆ.

ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದು, ಶ್ರೀವಲ್ಲಿ ಎಂಬ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಮಿಂಚಲಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಡಿಸೆಂಬರ್ 25ರಂದು ಈ ಸಿನಿಮಾ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಚಿತ್ರತಂಡ ಇದೀಗ ಡಿಸೆಂಬರ್ 17ರಂದು ರಿಲೀಸ್ ಮಾಡಲು ನಿರ್ಧರಿಸಿದೆ.

https://twitter.com/PushpaMovie?ref_src=twsrc%5Egoogle%7Ctwcamp%5Eserp%7Ctwgr%5Eauthor

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...