alex Certify ವರ್ಷದ ನಂತರ ಸಚಿವ ಸ್ಥಾನದ ಭರವಸೆ: ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಪುಟ್ಟರಂಗಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷದ ನಂತರ ಸಚಿವ ಸ್ಥಾನದ ಭರವಸೆ: ಉಪ ಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಕೈತಪ್ಪಿದ್ದರಿಂದ ವಿಧಾನಸಭೆ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಳ್ಳಲು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ನಿರ್ಧರಿಸಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನೊಂದು ವರ್ಷದ ನಂತರ ಸಚಿವ ಸ್ಥಾನದ ಭರವಸೆ ನೀಡಲಾಗಿದೆ. ಅಲ್ಲಿವರೆಗೆ ಉಪ ಸಭಾಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಸಚಿವ ಸ್ಥಾನ ಸಿಗದ ಕಾರಣ ಬೇಸರ ಇದ್ದುದು ನಿಜ. ಪಕ್ಷದ ವರಿಷ್ಠ ತೀರ್ಮಾನಕ್ಕೆ ತಲೆಬಾಗಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಪಕ್ಷ ಕೊಟ್ಟ ಜವಾಬ್ದಾರಿ ನಿರ್ವಹಿಸಲು ಒಪ್ಪಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...