alex Certify ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ: ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಯಳಂದೂರು ತಾಲೂಕಿನ ಉಪ್ಪಿನಮೋಳೆಯಲ್ಲಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೈತಪ್ಪಿದೆ. ನಾನು ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ. ಬೆಂಬಲಿಗರು ಮತ್ತು ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಜೊತೆಗೆ ಸಂಪರ್ಕ ಕಡಿತವಾಗುಲಿದ್ದು, ಮತದಾರರ ಬಳಿ ಹೋಗಲು ಸಾಧ್ಯವಾಗುವುದಿಲ್ಲ. ನನಗೆ ಈ ಹುದ್ದೆ ಬೇಡವೆಂದು ಮುಖ್ಯಮಂತ್ರಿಗಳಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

ಈ ಮೊದಲು ನನಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಇದಕ್ಕೆ ಕಾರಣವೇನೆಂದು ಗೊತ್ತಿಲ್ಲ. ನನಗೆ ಉಪಸಭಾಧ್ಯಕ್ಷ ಸ್ಥಾನ ಬೇಡ, ನಾನು ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...