alex Certify BIG NEWS: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಭರವಸೆ: ಶಾಸಕ ಪುಟ್ಟರಂಗ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಭರವಸೆ: ಶಾಸಕ ಪುಟ್ಟರಂಗ ಶೆಟ್ಟಿ

ಚಾಮರಾಜನಗರ: ಜೂನ್ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಥಾನ ಕೊಡುವುದು ಬಿಡುವುದು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಉಪ ಸಭಾಪತಿ ಸ್ಥಾನ ಕೊಟ್ಟಿದ್ದರು. ಆದರೆ, ನಾನೇ ಬೇಡವೆಂದೆ ಎಂದು ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಹೈಕಮಾಂಡ್ ಗೆ ಗೊತ್ತು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಕಾರ್ಯಕ್ರಮಗಳಲ್ಲಿ ಒಟ್ಟಾಗಿಯೇ ಇಬ್ಬರು ಭಾಗವಹಿಸುತ್ತಿದ್ದಾರೆ. ಭಿನ್ನಾಭಿಪ್ರಾಯ ಎಂಬುದು ವಿರೋಧ ಪಕ್ಷಗಳ ಆರೋಪವಷ್ಟೇ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...