
ಮಂಗಳೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥರಾದ ಘಟನೆ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ಮಧ್ಯಾಹ್ನದ ಊಟದ ಜೊತೆಗೆ ಅಣಬೆ ಪದಾರ್ಥವನ್ನು ಕುಟುಂಬದವರು ಸೇವಿಸಿದ್ದು, ಅವರೆಲ್ಲರೂ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥಗೊಂಡ ಕುಟುಂಬದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.