alex Certify ಮೀನು ಮಾರುತ್ತಿದ್ದ ಮೂವರಿಗೆ ಚೂರಿ ಇರಿತ, ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ಮಾರುತ್ತಿದ್ದ ಮೂವರಿಗೆ ಚೂರಿ ಇರಿತ, ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ಮೂವರಿಗೆ ಚೂರಿಯಿಂದ ಇರಿಯಲಾಗಿದೆ.

ಮೋಹನ್, ಮಹೇಶ್ ಮತ್ತು ಅಶೋಕ್ ಅವರ ಮೇಲೆ ದಾಳಿ ಮಾಡಿ ಚೂರಿಯಿಂದ ಇರಿಯಲಾಗಿದೆ. ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಳಂತಿಲದಲ್ಲಿ ಮೊನ್ನೆ ನಡೆದಿದ್ದ ಘಟನೆಗೆ ಪ್ರತೀಕಾರವಾಗಿ ಈ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...