alex Certify ಬಿಜೆಪಿ ಮುಖಂಡನ ಹತ್ಯೆ: ಕರಾವಳಿ ಉದ್ವಿಗ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಮುಖಂಡನ ಹತ್ಯೆ: ಕರಾವಳಿ ಉದ್ವಿಗ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಘಟನೆ ನಡೆದಿದೆ. ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ಅವರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಪುತ್ತೂರು, ಸುಳ್ಯದಲ್ಲಿ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಇಂತಹ ಕೃತ್ಯವೆಸಗಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನಡಿ ಶಿಕ್ಷಿಸಲಾಗುತ್ತದೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ಕರುಣಿಸಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...