
ಚಾಮರಾಜನಗರ: ಲೋಕೋಪಯೋಗಿ ಇಲಾಖೆ ಗುಣ ಭರವಸೆ ವಿಭಾಗದ ಲ್ಯಾಬ್ ಟೆಕ್ನಿಷಿಯನ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲ್ಯಾಬ್ ಟೆಕ್ನಿಷಿಯನ್ ನಂದರಾಜು 4,500 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾಮರಾಜನಗರದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಂದರಾಜು ಲಂಚ ಸ್ವೀಕರಿಸುವಾಗ ವಶಕ್ಕೆ ಪಡೆಯಲಾಗಿದೆ.
ಎಂ ಸ್ಯಾಂಡ್ ಗುಣಮಟ್ಟ ಪರೀಕ್ಷಾ ವರದಿ ನೀಡಲು ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕ್ರಷರ್ ಮಾಲಿಕ ಪ್ರಸನ್ನ ಕುಮಾರನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಲ್ಯಾಬ್ ಟೆಕ್ನಿಷಿಯನ್ ನಂದರಾಜು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.