ಕತಾರ್: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಗೂಢಚರ್ಯೆ ಆರೋಪದಲ್ಲಿ ಕತಾರ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತದ 8 ನೌಕಾಪಡೆ ಸಿಬ್ಬಂದಿಗಳಿಗೆ ಕತಾರ್ ನ್ಯಾಯಾಲಯ ಶಿಕ್ಷೆ ಕಡಿತಗೊಳಿಸಿದೆ.
ಭಾರತದ ನೌಕಾಪಡೆ ಯೋಧರಿಗೆ ಮರಣದಂಡನೆ ವಿಧಿಸಿದ್ದ ತೀರ್ಪಿನ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಸ್ವೀಕರಿಸಿದ್ದು, ನೌಕಾಪಡೆಯ 8 ಯೋಧರಿಗೆ ಮರಣದಂಡನೆ ರದ್ದುಮಾಡಲಾಗಿದೆ.
ಗೂಢಚರ್ಯೆ ಆರೋಪ ಪ್ರಕರಣದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ನವಜೋತ್ ಸಿಂಗ್ ಗಿಲ್, ಕ್ಯಾ.ಬಿರೇಂದ್ರ ಕುಮಾರ್ ವರ್ಮಾ, ಕ್ಯಾ.ಸೌರಭ್ ವಸಿಷ್ಟ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಲಾ, ಕಮಾಂಡರ್ ಸಂಜೀವ್ ಗುಪ್ತಾ ಹಾಗೂ ನಾವಿಕ ರಾಗೇಶ್ ಎಂಬುವವರು ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದರು.