ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ 10 ಮಂದಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.
ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿ ಆತಂಕ ಮೂಡಿಸಿದ್ದು, ಸರ್ಕಾರದಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 57 ಮಂದಿಯ ಆರ್.ಟಿ.ಪಿ.ಆರ್. ಪರೀಕ್ಷೆ ನಡೆಸಿದಾಗ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಅವರೆಲ್ಲರಿಗೂ ಮನೆಯಲ್ಲಿ ಕ್ವಾರಂಟೈನ್ ಆಗಲು ಆರೋಗ್ಯ ಇಲಾಖೆ ಸಿಬ್ಬಂದಿ ಸೂಚನೆ ನೀಡಿ ಸದಾ ಸಂಪರ್ಕದಲ್ಲಿರುವಂತೆ ತಿಳಿಸಿದ್ದಾರೆ. ಆದರೆ, ಇವರಲ್ಲಿ 10 ಮಂದಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ.