ಬೆಳಗಾವಿ : ರಾಜ್ಯದಲ್ಲಿ ಮಳೆ ಬಾರದ ಹಿನ್ನೆಲೆ ಬರಗಾಲ ಆವರಿಸಿದ್ದು, ಬೆಳೆಗಳು ಒಣಗಿ ನಿಂತಿದೆ. ಈ ಹಿನ್ನೆಲೆ ಮೋಡ ಬಿತ್ತನೆ ಮಾಡುವಂತೆ ಸದನಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಕಾಶ್ ಕೋಳಿವಾಡ ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಮೋಡ ಬಿತ್ತನೆ ಈ ಹಿಂದೆ ಯಶಸ್ಸು ಕಂಡಿದೆ. ಹೀಗಾಗಿ ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಮಾತನಾಡಿ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದರು.
ಮೋಡ ಬಿತ್ತನೆ ಮಾಡಿರುವುದರಿಂದ ಮಳೆಯಾಗಲಿದೆ. ಕಡಿಮೆ ವೆಚ್ಚದಲ್ಲಿ ಮಳೆ ತರಿಸಿ ರೈತರಿಗೆ ಅನುಕೂಲ ಮಾಡಬಹುದು. ಅದಕ್ಕಾಗಿ ಸರ್ಕಾರ ಅನುದಾನ ನೀಡುವಂತೆ ಮನವಿ ಮಾಡಿದರು. ಮೋಡ ಬಿತ್ತನೆಯನ್ನು ಬಹಳ ರಾಜ್ಯಗಳಲ್ಲಿ ಪ್ರಯೋಗ ಮಾಡುತ್ತಿದ್ದಾರೆ. ಈ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇನೆ, ರಾಜ್ಯ ಸರ್ಕಾರದಿಂದ ಶೀಘ್ರವೇ ಮೋಡ ಬಿತ್ತನೆ ಆರಂಭವಾಗಲಿದೆ ಎಂಬ ಸುಳಿವನ್ನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.