alex Certify ಈ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳಿಗೆ ಕೇಂದ್ರದಿಂದ ಶೀಘ್ರ ಅನುಮತಿ : ಸಚಿವ ಬೋಸರಾಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳಿಗೆ ಕೇಂದ್ರದಿಂದ ಶೀಘ್ರ ಅನುಮತಿ : ಸಚಿವ ಬೋಸರಾಜು

ನವದೆಹಲಿ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಟಗರಿ – 3 ವಿಜ್ಞಾನ ಕೇಂದ್ರ, 8 ಮೀಟರ್ ಅಗಲದ ಟೈಪ್ – ಬಿ ಡಿಜಿಟಲ್ ಡೋಮ್ ಪ್ಲಾನೇಟೋರಿಯಮ್. ರಾಯಚೂರು ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಟಗರಿ – 2, ಟೈಪ್ ಬಿ ವಿಜ್ಞಾನ ಕೇಂದ್ರ ಸ್ಥಾಪನೆ, ಯಾದಗಿರಿ ಜಿಲ್ಲೆಯಲ್ಲಿ ಟೈಪ್ ಬಿ ಕೆಟಗರಿ – 3 ವಿಜ್ಞಾನ ಕೇಂದ್ರ ಸ್ಥಾಪನೆಯ ಪ್ರಸ್ತಾಪಗಳನ್ನ ಕೇಂದ್ರ ಸರಕಾರ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗಳಿಗೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆಯನ್ನ ಕೇಂದ್ರ ಸಚಿವರು ನೀಡಿದ್ದಾರೆ ಎಂದು  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು.

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವರಾದ ಜಿ ಕಿಶನ್ ರೆಡ್ಡಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಭಗವಂತ ಖುಬಾ ಹಾಗೂ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿಜ್ಞಾನ ಕೇಂದ್ರ ಹಾಗೂ ಡಿಜಿಟಲ್ ಡೋಮ್ ಪ್ಲಾನೆಟೋರಿಯಮ್ ನಿರ್ಮಾಣಕ್ಕಾಗಿ 9.36 ಏಕರೆ ಜಾಗವನ್ನು ಈಗಾಗಲೇ ಸಬ್-ರೀಜನಲ್ ಸೈನ್ಸ್ ಸೆಂಟರ್ ಸೊಸೈಟಿ ಗೆ ಹಂಚಿಕೆ ಮಾಡಲಾಗಿದೆ. ಅಲ್ಲದೇ, ಕೇಂದ್ರ ಸರಕಾರಕ್ಕೆ ಡಿಪಿಆರ್ ನ್ನು ಸಲ್ಲಿಸಲಾಗಿದೆ. ಈ ಕೇಂದ್ರಗಳ ಸ್ಥಾಪನೆಯಿಂದ ನಗರದ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಆಸಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪತ್ರವಹಿಸಲಿದೆ. ಈ ಬಗ್ಗೆ ಅಗತ್ಯ ಅನುದಾನವನ್ನು ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಕೇಂದ್ರ ಸರಕಾರದ ಅನುಮತಿಯ ಅಗತ್ಯವಿದೆ. ಅನುಮತಿಯನ್ನು ಶೀಘ್ರದಲ್ಲಿ ನೀಡಬೇಕು ಎನ್ನುವ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಯಿತು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳ ಸ್ಥಾಪನೆ

ಹಿಂದುಳಿದ ಜಿಲ್ಲೆಗಳಾಗಿರುವ ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಪ್ರಸ್ತಾಪಗಳಿಗೆ ಶೀಘ್ರ ಒಪ್ಪಿಗೆ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಯಾದಗಿರಿ ಜಿಲ್ಲೆಯಲ್ಲಿ 22.25 ಕೋಟಿ ರೂಪಾಯಿಗಳ ಅನುದಾನದಲ್ಲಿ ಕೆಟಗರಿ-3, ಟೈಪ್-ಬಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಅಗತ್ಯವಿರುವ ಶೇಕಡಾ 50 ರಷ್ಟು ಅನುದಾನ ರಾಜ್ಯ ಸರಕಾರ ಭರಿಸುವ ಒಪ್ಪಿಗೆಯನ್ನು ನೀಡಿದೆ. ಕೇಂದ್ರ ಸ್ಥಾಪನೆಗೆ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ ಎತ್ತಿದ್ದಂತಹ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ.ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ರಾಜ್ಯ ಸರಕಾರ ನೀಡಲು ಸಿದ್ದವಿದೆ ಎಂದು ಸಚಿವರು ತಿಳಿಸಿದರು.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...