ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು ಇರುವುದಿಲ್ಲ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ.
2021 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊರೋನಾ ಕಾರಣಕ್ಕೆ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ಆಧರಿಸಿ ಪರೀಕ್ಷೆ ನಡೆಸಲಾಗಿತ್ತು. ಈಗ ಶಿಕ್ಷಣ ತಜ್ಞರು ಮತ್ತು ಶಿಕ್ಷಕರ ಅಭಿಪ್ರಾಯಗಳನ್ನು ಪಡೆದ ನಂತರ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ.
ಪ್ರಥಮ ಭಾಷೆ ಹೊರತುಪಡಿಸಿದಂತೆ ಉಳಿದ ವಿಷಯಗಳಿಗೆ 100 ಅಂಕಗಳು ನಿಗದಿಪಡಿಸಲಾಗಿದೆ. ಇವುಗಳಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಸಲಾಗುತ್ತದೆ. ಪ್ರಥಮ ಭಾಷೆಗೆ 125 ಅಂಕ ನಿಗದಿಪಡಿಸಲಾಗಿದ್ದು, ಬಹು ಆಯ್ಕೆ ಪ್ರಶ್ನೆ ಕೈಬಿಡಲಾಗಿದೆ ಎಂದು ಹೇಳಲಾಗಿದೆ.