alex Certify ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಬಹು ಆಯ್ಕೆ ಪ್ರಶ್ನೆ ಇರಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಬಹು ಆಯ್ಕೆ ಪ್ರಶ್ನೆ ಇರಲ್ಲ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು ಇರುವುದಿಲ್ಲ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ.

2021 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊರೋನಾ ಕಾರಣಕ್ಕೆ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ಆಧರಿಸಿ ಪರೀಕ್ಷೆ ನಡೆಸಲಾಗಿತ್ತು. ಈಗ ಶಿಕ್ಷಣ ತಜ್ಞರು ಮತ್ತು ಶಿಕ್ಷಕರ ಅಭಿಪ್ರಾಯಗಳನ್ನು ಪಡೆದ ನಂತರ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ.

ಪ್ರಥಮ ಭಾಷೆ ಹೊರತುಪಡಿಸಿದಂತೆ ಉಳಿದ ವಿಷಯಗಳಿಗೆ 100 ಅಂಕಗಳು ನಿಗದಿಪಡಿಸಲಾಗಿದೆ. ಇವುಗಳಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಸಲಾಗುತ್ತದೆ. ಪ್ರಥಮ ಭಾಷೆಗೆ 125 ಅಂಕ ನಿಗದಿಪಡಿಸಲಾಗಿದ್ದು, ಬಹು ಆಯ್ಕೆ ಪ್ರಶ್ನೆ ಕೈಬಿಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...