ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಾಗುತ್ತಿದ್ದಂಯೆ ಸ್ಪೀಕರ್ ಯು.ಟಿ.ಖಾದರ್ ಕಲಾಪವನ್ನು ಮುಂದೂಡಿದ್ದಾರೆ. ಸ್ಪೀಕರ್ ನಡೆಗೆ ವಿಪಕ್ಷ ಬಿಜೆಪಿ ನಾಯಕರು ತಿವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸ್ಪೀಕರ್ ಯು.ಟಿ.ಖಾದರ್ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಬಗ್ಗೆ ಚರ್ಚಿಸಲು ಅವಕಾಶ ಕೊಟ್ಟಿಲ್ಲ. ಬೇರೆ ವಿಷಯಗಳ ಚರ್ಚೆಗೆ ಅವಕಾಶ ನೀಡಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಮನಸೋ ಇಚ್ಚೆ ಅಧಿವೇಶನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಲಾಠಿ ಚಾರ್ಜ್ ಬಗ್ಗೆ ಚರ್ಚೆಯಾಗಬೇಕು. ಅದನ್ನು ಬಿಟ್ಟು ಬೇರೆ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತಿದ್ದಾರೆ. ಪಾಯಿಂಟ್ ಆಫ್ ಆರ್ಡರ್ ಎತ್ತಿದರೂ ಗಮನ ಹರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.