alex Certify ರಾಜ್ಯದಲ್ಲಿ ನಮಗೆ ಕುಡಿಯಲು ನೀರಿಲ್ಲ; ತಮಿಳುನಾಡಿನ ಸಿಎಂ ಸ್ಟಾಲಿನ್ ಗೆ ಟಿಕೆಟ್ ಗಾಗಿ ಕಾವೇರಿ ನೀರು ಕೊಟ್ಟಿದ್ದಾರೆ; ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ನಮಗೆ ಕುಡಿಯಲು ನೀರಿಲ್ಲ; ತಮಿಳುನಾಡಿನ ಸಿಎಂ ಸ್ಟಾಲಿನ್ ಗೆ ಟಿಕೆಟ್ ಗಾಗಿ ಕಾವೇರಿ ನೀರು ಕೊಟ್ಟಿದ್ದಾರೆ; ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಒಂದು ಸಣ್ಣ ಸಮಸ್ಯೆಯನ್ನು ಪರಿಹರಿಸಲು ಕೂಡ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಾವೇರಿ ಟ್ರಿಬ್ಯುನಲ್‌ನಲ್ಲಿ ಸರಿಯಾಗಿ ವಾದಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ತಮಿಳುನಾಡಿನ ಆತ್ಮೀಯ ಸ್ನೇಹಿತರಾದ ಮುಖ್ಯಮಂತ್ರಿ ಸ್ಟಾಲಿನ್‌ ಅವರಿಗೆ ಟಿಕೆಟ್‌ಗಾಗಿ ಕಾವೇರಿಯನ್ನು ನೀಡಿದ್ದಾರೆ. ಬೆಂಗಳೂರು, ಮಂಡ್ಯದಲ್ಲಿ ನೀರಿನ ಕೊರತೆಗೆ ಕಾಂಗ್ರೆಸ್ಸೇ ನೇರ ಕಾರಣ. ಜನರು ವಲಸೆ ಹೋಗಲು, ಬೀದಿಗೆ ಬರಲು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಅಪಕೀರ್ತಿ ತರಲು ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದು ಎಂಬಂತೆ ಬಿಂಬಿಸಿಕೊಳ್ಳುವಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಗೆಟ್ಟಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಸಿಎಎ ಜಾರಿ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್‌ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೂ ಈ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಬೇರೆ ದೇಶಗಳಿಂದ ಬಂದ ಅಲ್ಪಸಂಖ್ಯಾತರು ಪಾದಚಾರಿ ಮಾರ್ಗದಲ್ಲಿ ಬದುಕುತ್ತಿದ್ದು, ಆಶ್ರಯ ಕಳೆದುಕೊಂಡಿದ್ದಾರೆ. ಮಾನವೀಯತೆ ಇಲ್ಲದ ಕಾಂಗ್ರೆಸ್ಸಿಗರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈ ಸಾಮಾನ್ಯ ಜ್ಞಾನ ಸಿಎಂ ಸಿದ್ದರಾಮಯ್ಯನವರಿಗಿಲ್ಲ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...