alex Certify BIG NEWS: ಗೃಹ ಸಚಿವರು ಯಾರು ಅಂತಾನೇ ಗೊತ್ತಾಗ್ತಾ ಇಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಸಚಿವರು ಯಾರು ಅಂತಾನೇ ಗೊತ್ತಾಗ್ತಾ ಇಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶಾಲೆಗೆ ಹೋದ ಹೆಣ್ಣು ಮಕ್ಕಳು, ಕೆಲಸಕ್ಕೆ ಹೋದ ಮಹಿಳೆಯರು ಮನೆಗೆ ಸುರಕ್ಷಿತವಾಗಿ ವಾಪಾಸ್ ಬರುವ ಗ್ಯಾರಂಟಿಯೇ ಇಲ್ಲದಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆ ಬಳಿಕ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದೇ ಇಲ್ಲದಂತಾಗಿದೆ. ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ. ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ವಾಗ್ದಾಳಿ ನಡೆಸಿದರು.

ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದರು.

ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ.ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...