
ಬೆಂಗಳೂರು: ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಜಿಹಾದ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ
ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರವನ್ನು ಸರ್ಕಾರ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯನವರೇ ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ? ಎಂದು ಪ್ರಶ್ನಿಸಿದ್ದಾರೆ.
ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನ ಮುಚ್ಚಿಸಿ ಅದನ್ನ ಮುಸ್ಲಿಂರಿಗೆ ಕೊಡುವ ಅನಿವಾರ್ಯತೆ ಆದರೂ ಏನಿತ್ತು? ಜಾನುವಾರುಗಳಿಗೆ ಮಾತ್ರ ಆ ಚಿಕಿತ್ಸಾಲಯ ಸ್ಥಾಪಿಸಿಲ್ಲ. ಇತರೆ ಸಾಕು ಪ್ರಾಣಿಗಳ ಚಿಕಿತ್ಸೆಗೂ ಸ್ಥಾಪಿಸಲಾಗಿತ್ತು. ನಗರದ ಹೃದಯಭಾಗದಲ್ಲಿರುವ ಐನೂರು ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಸರ್ಕಾರದ ಲ್ಯಾಂಡ್ ಜಿಹಾದ್ ಎಂದು ಕರೆಯಬಹುದೇ? ಎಂದು ಕಿಡಿಕಾರಿದ್ದಾರೆ.