ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಭಾರತದ ರೀಯಲ್ ಹಿಟ್ಲರ್ ಅಂದ್ರೆ ಅದು ಕಾಂಗ್ರೆಸ್ ಪಕ್ಷ. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಯಾವ ಕಾರಣಕ್ಕೆ ತುರ್ತು ಪರಿಸ್ಥಿತಿ ಹೇರಿದ್ರು? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿಯವರನ್ನು ಹಿಟ್ಲರ್, ಮುಸಲೋನಿ ಅಂತಾ ಕಾಂಗ್ರೆಸ್ ನವರು ಕರೆದಿದ್ದಾರೆ. ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತೆವೆ. ಮೋದಿಯವರು ಈ ದೇಶದ ರಿಯಲ್ ಹೀರೋ. ಮೋದಿಯವರನ್ನು ಸರ್ವಾಧಿಕಾರಿ ಎಂದು ಕರೆದಿರುವ ಕಾಂಗ್ರೆಸ್ ನವರ ಹೇಳಿಕೆಯನ್ನು ನಾವು ಖಂಡಿಸುತೇವೆ ಎಂದು ಗುಡುಗಿದ್ದಾರೆ.