alex Certify ಉತ್ತರ ಕರ್ನಾಟಕವನ್ನು ಚಿನ್ನದ ನಾಡು ಮಾಡುತ್ತೇವೆ ಎಂದವರು ಮಾಡಿದ್ದೇನು? ಸಿದ್ದರಾಮಯ್ಯ ಸರ್ಕಾರ 17 ತಿಂಗಳಲ್ಲಿ 17 ಅವಾಂತರ ಮಾಡಿದೆ: ಆರ್‌. ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕವನ್ನು ಚಿನ್ನದ ನಾಡು ಮಾಡುತ್ತೇವೆ ಎಂದವರು ಮಾಡಿದ್ದೇನು? ಸಿದ್ದರಾಮಯ್ಯ ಸರ್ಕಾರ 17 ತಿಂಗಳಲ್ಲಿ 17 ಅವಾಂತರ ಮಾಡಿದೆ: ಆರ್‌. ಅಶೋಕ್ ವಾಗ್ದಾಳಿ

 

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಭರವಸೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ ಮಾಡಿದ್ದೇನು? ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ 17 ತಿಂಗಳಿಂದ 17 ಅವಾಂತರಗಳನ್ನು ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಳೆದ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನೀಡಿದ್ದ ರೀತಿಯ ಆಡಳಿತ ಈ ಬಾರಿ ನೀಡುತ್ತಿಲ್ಲ. ಸಿಎಂ ಮುಡಾ ಕೇಸ್‌ನಲ್ಲಿ ನರಳುತ್ತಿದ್ದರೆ, ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಕಿಡಿಕಾರಿದರು.

ಬೆಳಗಾವಿಯೊಂದರಲ್ಲೇ 325 ಮಕ್ಕಳು ಮೃತರಾಗಿದ್ದಾರೆ. ಯಾವ ಇಲಾಖೆಯ ಮೇಲೆಯೂ ಮುಖ್ಯಮಂತ್ರಿಗಳಿಗೆ ಹಿಡಿತ ಇಲ್ಲ. ಬಾಣಂತಿಯರು, ಮಕ್ಕಳು ಸಾಯುತ್ತಿದ್ದರೂ ಸರ್ಕಾರ ನಿದ್ದೆಗೆ ಜಾರಿದೆ ಎಂದರು.

ಅಭಿವೃದ್ಧಿ ಕಾರ್ಯ ಬಿಟ್ಟು ಸರ್ಕಾರ 17 ತಿಂಗಳಲ್ಲಿ 17 ಅವಾಂತರಗಳನ್ನು ಮಾಡಿಕೊಂಡಿದೆ. ವಕ್ಫ್‌ ಅವಾಂತರ, ಬಾಣಂತಿಯರ ಸಾವು, ಲಿಕ್ಕರ್ ಹಗರಣದ ಜೊತೆ ಈಗ ಮೆಡಿಕಲ್ ಮಾಫಿಯಾ ಸೇರಿಕೊಂಡಿದ್ದು ಎಲ್ಲ ವಿಚಾರಗಳ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.

ಸಿಎಂಗೆ ಇಲಾಖೆಯ ಮೇಲೆ ಹಿಡಿತ ಕೈ ತಪ್ಪಿದ ಕಾರಣ ಎಲ್ಲ ಸಚಿವರು ಹಣ ಮಾಡುವುದರಲ್ಲಿ ನಿರತರಾಗಿದ್ದಾರೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಹೊಸದಾಗಿ ಬಂದಾಗ ಧರ್ಮ ದರ್ಶನ ಮಾಡುತ್ತೇವೆ, ಜನಸಂಪರ್ಕ ಮಾಡುತ್ತೇವೆ ಎಂದು ಹೇಳಿದ್ದ ಮಾತನ್ನು ಮರೆತು ಹಣ ಮಾಡುವುದರಲ್ಲಿ ಇಡೀ ಸರ್ಕಾರ ನಿರತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಉತ್ತರ ಕರ್ನಾಟಕ ಅಭಿವೃದ್ದಿಗೆ ಹಿಂದೆ ಹೇಳಿದ್ದೇನು? ಈಗ ಮಾಡುತ್ತಿರುವುದೇನು? ಈ ವಿಚಾರವನ್ನು ಸಹ ನಾವು ಪ್ರಸ್ತಾಪ ಮಾಡಲಿದ್ದೇವೆ. ಉತ್ತರ ಕರ್ನಾಟಕವನ್ನು ಚಿನ್ನದ ನಾಡು ಮಾಡುತ್ತೇವೆ ಎಂದು ಹೇಳಿದ್ದವರು ಈಗ ಎಲ್ಲಿ ಹೋದರು? ಕರ್ನಾಟಕದ ಇತಿಹಾಸದಲ್ಲೇ ಈ ಸರ್ಕಾರ ಅತ್ಯಂತ ಕಳಪೆ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...