
ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವಾರಸುದಾರರಿಲ್ಲದ 1000 ಕ್ಕೂ ಅಧಿಕ ಜನರ ಆಸ್ಥಿಯನ್ನು ಕಾವೇರಿಯಲ್ಲಿ ವಿಸರ್ಜನೆ ಮಾಡಿ ಸದ್ಗತಿಗೆ ಪ್ರಾರ್ಥಿಸಿದ್ದ ಕಂದಾಯ ಸಚಿವ ಆರ್. ಅಶೋಕ್ ಇಂದು ಪಿಂಡ ಪ್ರದಾನ ಮಾಡಲಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಕೊರೋನಾದಿಂದ ಮೃತಪಟ್ಟ 1200 ಕ್ಕೂ ಅಧಿಕ ಮಂದಿಯ ಪಿಂಡಪ್ರದಾನ ಮಾಡಲಿದ್ದಾರೆ. ಶವಗಳಿಗೆ ಮುಕ್ತಿ ದೊರಕಿಸಲು ಜೂನ್ ತಿಂಗಳಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿತ್ತು. ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಪಿಂಡಪ್ರದಾನ ಮಾಡುವುದರೊಂದಿಗೆ ಮೋಕ್ಷ ದೊರಕಿಸಿಕೊಡುವ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣದ ಗೋಸಾಯಿ ಘಾಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮೃತಪಟ್ಟವರಿಗೆ ಗೌರವಯುತವಾಗಿ ಶವಸಂಸ್ಕಾರ ಮಾಡಲು ಸರ್ಕಾರ ಮುಂದಾಗಿದೆ. ಯಾರೂ ಅನಾಥರಲ್ಲ ಎಂದು ಹೇಳುವ ಮೂಲಕ ಅಶೋಕ್ ಮಾನವೀಯತೆ ಮೆರೆದಿದ್ದಾರೆ.