ಬೆಂಗಳೂರು: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಮಳೆ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಭಾಗಶಃ ಹಾನಿಯಾಗಿರುವ ಮನೆ 1 ಲಕ್ಷ ರೂ., ನೀರು ನುಗ್ಗಿ ಹಾನಿಯಾಗಿದ್ದರೆ 10 ಸಾವಿರ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಭಾಗಿಯಾಗಿದ್ದ ಅಶೋಕ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರವಾಹ ಪೀಡಿತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಇತ್ತೀಚೆಗೆ ಚಂಡಮಾರುತದ ಸಂದರ್ಭದಲ್ಲಿ 300 ಮನೆಗಳು ಸಂಪೂರ್ಣ ಹಾನಿಯಾಗಿದ್ದು, ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.