ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ಶಹರ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆದಿದೆ.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿ ಶಹರ ಠಾಣೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆದಿದ್ದು, ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕರಸೇವಕ ಶ್ರೀಕಾಂತ್ ಪಾಟೀಲ್ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಶಹರ ಠಾಣೆಯ ಇನ್ಸ್ ಪೆಕ್ಟರ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು. ಪೊಲೀಸ್ ಕಮೀಷ್ನರ್ ವರ್ಗಾವಣೆ ಮಾಡುವುದಾಗಿ ಹೇಳಿದ್ದಾರೆ. ಮೂರು ದಿನಗಳ ಒಳಗಾಗಿ ಇನ್ಸ್ ಪೆಕ್ಟರ್ ರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಇದೊಂದು ಗೂಂಡಾಗಿರಿ ಸರ್ಕಾರ, ಹೇಡಿ ಸರ್ಕಾರ. ಕರಸೇವಕರನ್ನು ಬಂಧನ ಖಂಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.