ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ 4 -5 ನಾಯಕರು ಮುಖ್ಯಮಂತ್ರಿಯಾಗಲು ಕಾಯುತಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವೀಕ್ ಆಗಿರುವುದರಿಂದ ಹೀಗೆಲ್ಲ ಆಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿರುವುದು ಇದರಿಂದಲೇ ಗೊತ್ತಾಗುತ್ತದೆ. ನಮ್ಮ ಪಕ್ಷದ ನಾಯಕತ್ವ ತುಂಬಾ ಸ್ಟ್ರಾಂದ್ ಆಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮ ಪಕ್ಷದ ನಾಯಕತ್ವ ತುಂಬಾ ಸ್ಟ್ರಾಂಗ್ ಇದೆ. ನಮ್ಮ ಪಕ್ಷದಲ್ಲಿ ಸಿಎಂ ಅಭ್ಯರ್ಥಿಯನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಅಶೋಕ್ ಹೇಳಿದ್ದಾರೆ.
ಕೆಲ ಕಾಂಗ್ರೆಸ್ ಶಾಸಕರು ಮುಂದಿನ ಸಿಎಂ ಕುರಿತಾಗಿ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ವೀಕ್ ಇದೆ. ನಮ್ಮ ಪಕ್ಷದ ನಾಯಕತ್ವ ಸ್ಟ್ರಾಂಗ್ ಇದೆ ಎಂದು ಹೇಳಿದ್ದಾರೆ.