ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿ ಮಾಡಲಾಗಿರುವ ಲಾಕ್ ಡೌನ್ ಮೇ 24 ರಂದು ಅಂತ್ಯವಾಗಲಿದೆ ಎಂದುಕೊಂಡಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಈ ತಿಂಗಳ ಅಂತ್ಯದವರೆಗೆ ಬಿಗಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎನ್ನಲಾಗಿದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಮುಂದಿನ ವಾರದಿಂದ ಮತ್ತಷ್ಟು ಕಠಿಣ ನಿಯಮ ಜಾರಿಯಾಗಲಿದೆ.
ಮುಂದಿನ ವಾರ ಕರ್ಫ್ಯೂ ನಿಯಮ ಮತ್ತಷ್ಟು ಕಠಿಣವಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಭಾವ್ಯ ಮೂರನೇ ಅಲೆ ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂದಿನ ವಾರ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 127 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಪ್ರತಿ ಜಿಲ್ಲೆಗೆ 10,000 ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.