ಬೆಂಗಳೂರು : ರಾಜ್ಯರಾಜಕಾರಣದಲ್ಲಿ ಹನಿಟ್ರ್ಯಾಪ್ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಫೋನ್ ಕದ್ದಾಲಿಕೆ ಆಗುತ್ತಿದೆ. ಸಚಿವ ರಾಜಣ್ಣ ಹಾಗೂ ಅವರ ಪುತ್ರ ರಾಜೇಂದ್ರ ಅವರ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳಿದ್ದಾರೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ. ಇದರಲ್ಲಿ ದೊಡ್ಡ ಜಾಲವೇ ಇದೆ ಎಂದಿದ್ದಾರೆ.
ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಗ್ಯ ವಿಚಾರಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಫೋನ್ ಕದ್ದಾಲಿಕೆಯ ಬಗ್ಗೆ ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದೆ. . ಕಾಂಗ್ರೆಸ್ ಶಾಸಕರ, ಸಚಿವರ, ಹೈಕಮಾಂಡ್ನ ಕೆಲ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.