alex Certify BIG NEWS: ಸರ್ಕಾರದ ವಿರುದ್ಧ ಮತ್ತೆ ಬಿಜೆಪಿ ಹೋರಾಟ ಆರಂಭ: ಆರ್. ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ವಿರುದ್ಧ ಮತ್ತೆ ಬಿಜೆಪಿ ಹೋರಾಟ ಆರಂಭ: ಆರ್. ಅಶೋಕ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಮುಡಾ ಹಗರಣದಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ವರ್ಗಾವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ ಎಂದರು.

ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್‌ ಚಿಟ್‌ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್‌ ಚಿಟ್‌ ನೀಡುವುದಿಲ್ಲವೇ? ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...