alex Certify ಅಧಿಕಾರಿ ಬಳಿ ಹಣ ಕೇಳಿದ ಕಂದಾಯ ಸಚಿವ ಆರ್. ಅಶೋಕ್ ಪಿಎಗೆ ಗೇಟ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಿ ಬಳಿ ಹಣ ಕೇಳಿದ ಕಂದಾಯ ಸಚಿವ ಆರ್. ಅಶೋಕ್ ಪಿಎಗೆ ಗೇಟ್ ಪಾಸ್

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರ ಪಿಎ ಗಂಗಾಧರ್ ಗೆ ಗೇಟ್ ಪಾಸ್ ನೀಡಲಾಗಿದೆ. ಅವರ ವಿರುದ್ಧ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಅಶೋಕ್ ಅವರ ಪಿಎ ಸ್ಥಾನದಿಂದ ಗಂಗಾಧರ್ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಅವರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲಾಗಿದೆ. ವಿಧಾನಸಭೆ ಸಚಿವಾಲಯದ ಸಿಬ್ಬಂದಿಯಾಗಿದ್ದ ಅವರು ಅಶೋಕ್ ಪಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶೃಂಗೇರಿ ಸಬ್ ರಿಜಿಸ್ಟ್ರಾರ್ ಬಳಿ ಹಣ ಕೇಳಿದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಪೊಲೀಸರಿಗೂ ಶೃಂಗೇರಿ ಸಬ್ ರಿಜಿಸ್ಟ್ರಾರ್ ದೂರು ನೀಡಿದ್ದರು.

ಜನವರಿ 24 ರಂದು ಸಚಿವ ಅಶೋಕ್ ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಆಪ್ತ ಸಹಾಯಕ ಗಂಗಾಧರ್ ಹಣ ಕೇಳಿದ್ದಾರೆ ಎಂದು ಆರೋಪಿಸಲಾಗಿದ್ದು, ತನಗೆ ಸೂಕ್ತ ರಕ್ಷಣೆ ನೀಡುವಂತೆ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜು ಪೊಲೀಸರಿಗೆ ದೂರು ನೀಡಿ ಮನವಿ ಮಾಡಿದ್ದರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...