alex Certify BIG NEWS: ಹಣ ಕೇಳಿದ ಕಂದಾಯ ಸಚಿವರ ಪಿಎ ವಿರುದ್ಧ ಸಬ್ ರಿಜಿಸ್ಟ್ರಾರ್ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಣ ಕೇಳಿದ ಕಂದಾಯ ಸಚಿವರ ಪಿಎ ವಿರುದ್ಧ ಸಬ್ ರಿಜಿಸ್ಟ್ರಾರ್ ದೂರು

ಚಿಕ್ಕಮಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರ ಪಿಎ ವಿರುದ್ಧ ಶೃಂಗೇರಿ ಸಬ್ ರಿಜಿಸ್ಟ್ರಾರ್ ದೂರು ನೀಡಿದ್ದಾರೆ.

ಸಚಿವ ಆರ್. ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ಹಣ ಕೇಳಿದ್ದಾರೆ ಎಂದು ಆರೋಪಿಸಲಾಗಿದ್ದು ತನಗೆ ಸೂಕ್ತ ರಕ್ಷಣೆ ನೀಡುವಂತೆ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜು ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣೆಗೆ ದೂರು ನೀಡಲಾಗಿದೆ. ಜನವರಿ 24 ರಂದು ಸಚಿವ ಅಶೋಕ್ ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಆಪ್ತ ಸಹಾಯಕ ಗಂಗಾಧರ ಹಣ ಕೇಳಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಇವರ ನಡುವೆ ನಡೆದ ಸಂಭಾಷಣೆ ಆಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...