ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ. ಫೋಟೋಗಳು ವೈರಲ್ ಆಗಿವೆ. ಜೈಲಿನಲ್ಲಿ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾನೆ. ಫೋಟೋ ತೆಗೆಯಲು ಜೈಲಿನಲ್ಲಿ ಮೊಬೈಲ್ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಸಾಲು ಸಾಲು ಅಪರಾಧ ಪ್ರಕರನಗಳು ನಡೆಯುತ್ತಿದ್ದರೂ ಕೆಲ ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತದೆ? ಯಾವ ಖಾತೆ ಹೋಗುತ್ತದೆ ಎಂಬ ಭೀತಿಯಲ್ಲಿದ್ದಾರೆ. ಜೈಲಿನಲ್ಲಿ ನಡೆದ ಘಟನೆಗಳ ಬಗ್ಗೆ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.