ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಸರ್ಕಾರದ ಕ್ರಮಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್. ಅವರ ಸೂಚನೆಯಂತೆ ಇವರು ಕಾರ್ಯನಿರ್ವಹಿಸುತ್ತಾರೆ ಎಂದು ಕಿಡಿಕಾರಿದಾರೆ. ಈ ಸರ್ಕಾರ ಭಯೋತ್ಪಾದಕರ ಸೂಚನೆ ಮೇರೆಗೆ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ಹಾಕಿದ್ದ ಕೇಸ್ ಗಳನ್ನು ವಾಪಾಸ್ ಪಡೆಯಲು ಅವರು ಹೇಳಿದರು. ಅದಕ್ಕೆ ಇವರು ವಾಪಾಸ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಮೇಲೆ ಮುಡಾ ಹಗರಣ, ವಾಲ್ಮೀಕಿ ಹಗರಣ ಆರೋಪಗಳಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸೈಟ್ ವಾಪಾಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದವರೇ ಬೆಂಬಲ ಕೊಡುತ್ತಿಲ್ಲ. ಮುಸ್ಲಿಂರ ಒಲೈಕೆ ಮಾಡಿ ಉಳಿಯಬೇಕು ಎಂದು ಅವರು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಿಂದೂಗಳ ಮೇಲಿನ ಕೇಸ್ ಹಿಂಪಡೆದಿದ್ದೀರಾ? ರೇಪ್ ಕೇಸ್ ನಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಗಿದೆ. ಆದರೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಯಾಕೆ ಜೈಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.