ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡಿರುವ ವಿಚಾರವಾಗಿ ಬಿಜೆಪಿ ನಾಯಕರು ಹಾಗೂ ಈಶ್ವರಪ್ಪ ನಡುವೆ ಜಟಾಪಟಿ ಶುರುವಾಗಿದೆ.
ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪಗೆ ಮೋದಿ ಫೋಟೋ ಬಳಸುವ ಅಧಿಕಾರವಿಲ್ಲ. ಒಂದು ವೇಳೆ ಪ್ರಚಾರದ ವೇಳೆ ಅವರು ಮೋದಿ ಫೋಟೋ ಬಳಸಿದ್ದರೆ ಅದು ತಪ್ಪು ಎಂದಿದ್ದಾರೆ.
ಸರ್ಕಾರಿ ಕಾರ್ಯಕ್ರಮವಾಗಿದ್ದರೆ ಮೋದಿ ಪ್ರಧಾನಿಯಾಗಿರುವುದರಿಂದ ಅವರ ಫೋಟೋ ಬಳಸಿಕೊಳ್ಳಬಹುದಿತ್ತು. ಆದರೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಪ್ರಚಾರಕ್ಕೆ ಅವರ ಫೋಟೋ ಬಳಸಲು ಅವಕಾಶವಿಲ್ಲ. ಈಶ್ವರಪ್ಪ ಅನಧಿಕೃತವಾಗಿ ಮೋದಿ ಫೋಟೋ ಬಳಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ನಾಮಪತ್ರ ಸಲ್ಲಿಸಿದ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಮೋದಿ ಫೋಟೋ ಬಳಕೆ ವಿಚಾರವಾಗಿ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಕೋರ್ಟ್ ನಲ್ಲಿ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.