ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ನೋಟಿಸ್ ಕೊಟ್ಟಾಗ ಅದರ ಹಕ್ಕು ರಕ್ಷಣೆ ಮಾಡಬೇಕು. ಅದನ್ನು ರಾಜ್ಯಪಾಲರು ಮಾಡಿದ್ದಾರೆ. ರಾಜ್ಯಪಾಲರು ನೀಡಿದ ನೋಟಿಸ್ ಗೆ ಪದ ಬಳಕೆ ಸರಿಯಿಲ್ಲ ಎಂದು ಸಚಿವರು ಹೇಳುತ್ತಿದ್ದಾರೆ. ರಾಜ್ಯಪಾಲರಿಗಿಂತ ಇವರು ದೊಡ್ಡವರಾ? ಎಂದು ಪ್ರಶ್ನಿಸಿದ್ದಾರೆ.
ನೋಟಿಸ್ ನೀಡುವಾಗ ತಜ್ಞರ ಅಭಿಪ್ರಾಯ ಪಡೆದೇ ಕೊಟ್ಟಿರುತ್ತಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡಿ. ಇದಕ್ಕೆ ಕ್ಯಾಬಿನೆಟ್ ಮೀಟಿಂಗ್ ಕರೆದು ಚರ್ಚಿಸಿ, ರಾಜ್ಯಪಾಲರ ಮೇಲೆ ಒತ್ತಡ ಹೇರುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.