ಚಿಕ್ಕಬಳ್ಳಾಪುರ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದು, ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಲೇಟ್ ಆದ್ರೂ ಪ್ರಜ್ವಲ್ ರೇವಣ್ಣ ಒಪ್ಪಿಕೊಂಡಿದ್ದಾರೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಆರ್.ಅಶೋಕ್, ಪ್ರಜ್ವಲ್ ವಿಡಿಯೋ ಬಿಡುಗಡೆ ವಿಚಾರವಾಗಿ, ಲೇಟ್ ಆಗಿ ಆದ್ರೂ ಒಪ್ಪಿಕೊಂಡಿದ್ದಾರೆ. ತಪ್ಪಿಸಿಕೊಂಡು ಹೋಗುವುದು ದಾರಿಯಲ್ಲ, ತನಿಖೆಯಾಗಲಿ ಕಾನೂನಿನಲ್ಲಿ ಏನು ದಾರಿಗಳಿವೆ ನೋಡಬೇಕು ಎಂದು ಹೇಳಿದರು.
ಪ್ರಜ್ವಲ್ ಪ್ರಕರಣದ ಹಿಂದೆ ಷಡ್ಯಂತ್ರವಿದೆ ಎಂದು ವಿಶ್ವಕ್ಕೆ ಗೊತ್ತು. ಆದರೆ ಕಾನೂನಿನ ಅಡಿ ಕೆಲಸ ಮಡಬೇಕು. ಕೇಸ್ ತನಿಖೆಗೆ ಎಸ್ಐಟಿ ರಚನೆ ಮಾಡಿರುವುದು ಕಾಂಗ್ರೆಸ್ ನವರು. ಅವರ ಕಡೆಯವರನ್ನು ಬಚಾವ್ ಮಾಡಲು ಎಸ್ಐಟಿ ರಚನೆ ಮಾಡಿದ್ದಾರೆ ಎಂದು ಹೇಳಿದರು.