ಚಿಕ್ಕಮಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಅಶೋಕ್ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ಕಟೀಲ್ ರಾಜೀನಾಮೆ ನೀಡಿಲ್ಲ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ಅವರೇ ಮುಂದುವರೆಯಲಿದ್ದಾರೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ನಳೀನ್ ಕುಮಾರ್ ಕಟೀಲ್ ಯೂ ಟರ್ನ್ ಹೊಡೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಮಲ ಪಾಳಯದ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಹೊಸ ಅಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿದೆ.ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ, ಹೈಕಮಾಂಡ್ ಗೆ ಪತ್ರ ಬರೆದು ತನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.