
ಬೆಂಗಳೂರು: ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು! ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು ಎಂದು ವಿಪಕ್ಷ ನಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ. ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಜನತೆಯಲ್ಲಿ ಮೂಡಿರುವ ಈ ಅನುಮಾನ ನಿವಾರಿಸಲು, ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹಿಸಿದ್ದಾರೆ.