ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಲಪಟಾಯಿಸಿದ ಸುಮಾರು 20 ಕೋಟಿ ರೂಪಾಯಿ ಹಣ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಬಳಕೆಯಾಗಿರುವ ಬಗ್ಗೆ ಇ.ಡಿ. ಕೋರ್ಟ್ ಗೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಬಹಿರಂಗವಾಗಿದ್ದು, ಇದಕ್ಕೆ ಇಡೀ ಕಾಂಗ್ರೆಸ್ ಪಕ್ಷ ಹೊಣೆ ಹೊರಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ಹಣವನ್ನ ಮಾಜಿ ಸಚಿವ ಬಿ.ನಾಗೇಂದ್ರ ಅವರು ಲೋಕಸಭೆ ಚುನಾವಣೆಗೆ ಬಳಸಿಕೊಂಡಿದ್ದಾರಲ್ಲ, ಇದು ತಮ್ಮ ಆದೇಶದಂತೆ ನಡೆದಿದೆಯೇ? ಅಥವಾ ಇದು ರಾಹುಲ್ ಗಾಂಧಿ ಅವರ ಅಣತಿಯಂತೆ ನಡೆಯಿತೋ? ಎಂದು ಪ್ರಶ್ನಿಸಿದ್ದಾರೆ.
ಆರೋಪಿ ನಾಗೇಂದ್ರ ಅವರನ್ನ ಸದನದ ಒಳಗೆ ತಾವು ಅಷ್ಟು ಗಟ್ಟಿಯಾಗಿ ಸಮರ್ಥನೆ ಮಾಡಿಕೊಂಡಿದ್ದು ಏಕೆ ಅಂತ ಈಗ ಅರ್ಥವಾಗುತ್ತಿದೆ ಎಂದು ಟಾಂಗ್ ನೀಡಿದ್ದಾರೆ.