alex Certify BIG NEWS: ಟ್ಯಾಂಕರ್ ನೀರಿಗೆ ಲಾಭಿ: ಬ್ರ್ಯಾಂಡ್ ಬೆಂಗಳೂರಿಗೆ ಬಾಯ್ ಬಾಯ್ ಬೆಂಗಳೂರು ಎನ್ನುತ್ತಿದ್ದಾರೆ; ಆರ್.ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟ್ಯಾಂಕರ್ ನೀರಿಗೆ ಲಾಭಿ: ಬ್ರ್ಯಾಂಡ್ ಬೆಂಗಳೂರಿಗೆ ಬಾಯ್ ಬಾಯ್ ಬೆಂಗಳೂರು ಎನ್ನುತ್ತಿದ್ದಾರೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ನಿಶ್ಚಿತವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್‌ ಗಾಂಧಿ ಈಗಾಗಲೇ ಮೋದಿ ಸಮುದಾಯದ ಬಗ್ಗೆ ಮಾತನಾಡಿ ಜೈಲಿಗೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಹಿರಿಯಕ್ಕನ ಚಾಳಿ ಮನೆಮಂದಿಗೆ ಎನ್ನುವಂತೆ ಆ ಚಾಳಿ ಎಲ್ಲ ಕಾಂಗ್ರೆಸ್‌ ನಾಯಕರಿಗೆ ಬಂದಿದೆ ಎಂದರು.

ಸಚಿವ ಶಿವರಾಜ ತಂಗಡಗಿ ಬಿಜೆಪಿ ಸಚಿವರಾಗಿದ್ದಾಗ ಸೋನಿಯಾ ಗಾಂಧಿಗೆ ಹೊಡೆಯಿರಿ ಎನ್ನುತ್ತಿದ್ದು, ಈಗ ಮೋದಿಗೆ ಹೇಳುತ್ತಿದ್ದಾರೆ. ಮುಂದೆ ಜನರೇ ಅವರಿಗೆ ಹೊಡೆಯಲಿದ್ದಾರೆ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕಾದ ಇವರು ಬಾಯಲ್ಲಿ ಸಂಸ್ಕೃತಿ ತೋರಿಸುತ್ತಿದ್ದಾರೆ. ಇವರನ್ನು ಸಮರ್ಥಿಸುವವರು ಹಳ್ಳಿ ಭಾಷೆ ಬಳಕೆ ಎಂದು ಹೇಳುತ್ತಿದ್ದಾರೆ. ಇವರ ಗುರು ಸಿಎಂ ಸಿದ್ದರಾಮಯ್ಯ ಪ್ರಧಾನಿಯನ್ನು ಅವನು, ಇವನು ಎಂದಿದ್ದಾರೆ. ರಾಷ್ಟ್ರಪತಿಯವರನ್ನು, ಆರ್ಥಿಕ ಸಚಿವರನ್ನು ಏಕವಚನದಲ್ಲಿ ಕರೆಯುತ್ತಾರೆ. ರಾಜ್ಯದಲ್ಲಿ ಸಂಸ್ಕಾರ ಇಲ್ಲದ ಸರ್ಕಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ತಂಗಡಗಿ ನಿರುದ್ಯೋಗದ ಬಗ್ಗೆ ಮಾತಾಡುತ್ತಾರೆ. 50 ವರ್ಷದ ಆಡಳಿತ ನಡೆಸಿದ ಕಾಂಗ್ರೆಸ್‌ ಈ ಸಮಸ್ಯೆ ಬಗೆಹರಿಸಲಿಲ್ಲ. ಕೇಂದ್ರ ಸರ್ಕಾರದ ರೋಜ್‌ಗಾರ್‌ ಮೇಳ ಯೋಜನೆಯಡಿ 2024 ರ ಫೆಬ್ರವರಿ 13 ರಂದು ಒಂದೇ ದಿನ 1 ಲಕ್ಷ ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಈವರೆಗೆ 10 ರೋಜ್‌ಗಾರ್‌ ಮೇಳ ನಡೆಸಿದ್ದು, 6.5 ಲಕ್ಷ ಯುವಜನರಿಗೆ ಉದ್ಯೋಗ ದೊರೆತಿದೆ. ಕಾಂಗ್ರೆಸ್‌ ಸರ್ಕಾರ ಎಷ್ಟು ನಿರುದ್ಯೋಗಿಗಳಿಗೆ ಈವರೆಗೆ ಯುವನಿಧಿ ನೀಡಿದೆ? ಎಂದು ಪ್ರಶ್ನಿಸಿದರು.

ಬ್ರ್ಯಾಂಡ್‌ ಬೆಂಗಳೂರು ಬಾಂಬ್‌ ಬೆಂಗಳೂರು ಆಗಿದೆ. ಈಗ ಕುಡಿಯಲು ನೀರಿಲ್ಲದೇ ಎಲ್ಲರೂ ವಲಸೆ ಹೋಗಿ ಬಾಯ್‌ ಬಾಯ್ ಬೆಂಗಳೂರು ಆಗುತ್ತಿದೆ. ಜಲಮಂಡಳಿ ಎಲ್ಲಿಂದ ನೀರು ನೀಡುತ್ತೇವೆ ಎನ್ನುವುದನ್ನು ಬಿಟ್ಟು ಮುಂದಿನ ಐದು ವರ್ಷದಲ್ಲಿ ಕೆರೆ ತುಂಬಿಸುತ್ತೇವೆ ಎನ್ನುತ್ತಿದ್ದಾರೆ. ನಗರದಲ್ಲಿ ಟ್ಯಾಂಕರ್‌ ಲಾಬಿ ನಡೆಯುತ್ತಿದೆ. ಕಲುಷಿತ ನೀರಿನಿಂದ ಜನರಿಗೆ ರೋಗ ಬರುತ್ತಿದೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...