alex Certify BIG NEWS: ಹುಬ್ಬಳ್ಳಿ ಘಟನೆಯ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಬ್ಬಳ್ಳಿ ಘಟನೆಯ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದುಗಳ ಜೀವಕ್ಕೆ ಬೆಲೆ ಇಲ್ಲದಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಬೆಂಬಲವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಬಿದರಗುಪ್ಪೆಯಲ್ಲಿ ಮಾತನಡಿದ ಆರ್.ಅಶೋಕ್, ಜೈ ಶ್ರೀರಾಮ್ ಎಂದವರಿಗೆ ಹೊಡೆಯುತ್ತಾರೆ. ಹನುಮಾನ್ ಚಾಲೀಸ ಹಾಕಿದರೆ ಹಲ್ಲೆ ಮಾಡುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಬಿರಿಯನಿ ಕೊಡಾರೆ ಜೊತೆ ವಿಧಾನಸೌಧಕ್ಕೆ ಪಾಸ್ ಕೊಡ್ತಾರೆ ರಾಜ್ಯದಲ್ಲಿ ತಾಲಿಬಾನ್ ರೀತಿಯ ಸರ್ಕಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ಘೋರ ದುರಂತ. ಇದೊಂದು ಲವ್ ಜಿಹಾದ್ ಎಂದು ಹೇಳಿದರೆ ಕಾಂಗ್ರೆಸ್ ನಾಯಕರು ಇದು ಲವ್ ಜಿಹಾದ್ ಪ್ರಕರಣವಲ್ಲ ಎನ್ನುತ್ತಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಪೊರೇಟರ್ ಅವರೇ ಹೇಳಿತ್ತಿದ್ದಾರೆ. ಇದು ಲವ್ ಜಿಹಾದ್ ಎಂದು. ಇವರಿಗೆ ತಮ್ಮದೇ ಆದ ಪಕ್ಷದ ಕಾರ್ಯಕರ್ತನನ್ನು ರಕ್ಷಣೆ ಮಾಡುವ ಯೋಗ್ಯತೆ ಇಲ್ಲ ಎಂದು ಕಿಡಿಕಾರಿದರು.

ನೇಹಾ ಕೊಲೆ ಲವ್ ವಿಚಾರವಾಗಿ ಆಗಿದ್ದು ಎಂದು ಹೇಳುವ ಮೂಲಕ ಪ್ರಕರಣವನ್ನೇ ಮುಚ್ಚಿ ಹಾಕುವ ಯತ್ನ ನಡೆದಿದೆ. ನೇಹ ಹತ್ಯೆ ಪ್ರಕರಣ ಪ್ರೇಮಿಗಳ ಕಲಹ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರೆ ಗೃಹ ಸಚಿವ ಪರಮೇಶ್ವರ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದಾಖಲೆಗಳನ್ನು ಬಿಡುಗಡೆ ಮಾಡ್ತಾರೆ. ಬಳಿಕ ಕ್ಷಮೆ ಕೋರುವ ನಾಟಕವಾಡಿದ್ದಾರೆ. ಪ್ರಕರಣವನ್ನೇ ಮುಚ್ಚಿ ಹಾಕುವ ಯತ್ನ ನಡೆಸಿದ್ದಾರೆ. ಹುಬ್ಬಳ್ಳಿ ಪ್ರಕರಣದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...