alex Certify ಕೋಟ್ಯಂತರ ಹಣ ಟಕಾಟಕ್‌ ಆಗಿ ಕಾಂಗ್ರೆಸ್ ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ: ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ; ಆರ್. ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಟ್ಯಂತರ ಹಣ ಟಕಾಟಕ್‌ ಆಗಿ ಕಾಂಗ್ರೆಸ್ ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ: ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಪಕ್ಷನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ವಾಲ್ಮೀಕಿ ನಿಗಮದ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ ಎಂದು ಹೇಳಿದರು.

ನಿಗಮದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ ಎಂಬಂತಾಗಿದೆ ಎಂದು ಕಿಡಿಕಾರಿದರು.

ಹಣ ವರ್ಗಾಯಿಸಲು ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಅಧಿಕಾರಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಜಿ.ಪದ್ಮನಾಭ್‌, ಸುಜಾ ಮೊದಲಾದ ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿದ್ದಾರೆ. ಆದರೂ ಸಚಿವರ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಅಧಿಕಾರಿಗಳನ್ನು ಬಂಧಿಸಿಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ಟಕಾಟಕ್‌ ಎಂದು ಹಣ ಹಾಕುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಇಲ್ಲಿ ನಿಗಮದಿಂದ ಆಗಾಗ್ಗೆ ಕೋಟ್ಯಂತರ ರೂಪಾಯಿ ಟಕಾಟಕ್‌ ಆಗಿ ಕಾಂಗ್ರೆಸ್‌ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ. 25 ಸಾವಿರ ಕೋಟಿ ರೂ. ದಲಿತರ ಹಣ ಟಕಾಟಕ್‌ ಎಂದು ಕಾಣೆಯಾಗಿದೆ. ಬಿತ್ತನೆ ಬೀಜಗಳ ದರ ಟಕಾಟಕ್‌ ಎಂದು ಏರಿಕೆಯಾಗಿದೆ. ಭಯೋತ್ಪಾದನೆ ಟಕಾಟಕ್‌ ಎಂದು ಮೇಲೆದ್ದಿದೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...