ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಎಂದು ಒಪ್ಪಲು ಸಾಧ್ಯವಿಲ್ಲ. ಅವರು ನಮಗೆ ನಾಯಕರಲ್ಲ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಅದು ವಿಜಯೇಂದ್ರ ಹಾಗೂ ಜಾರಕಿಹಿಒಳಿ ನಡುವಿನ ಗಲಾಟೆ. ಅದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಕೇಂದ್ರ ನಾಯಕರ ಸಂಪರ್ಕದಲ್ಲಿದ್ದಾರೆ. ಅವರ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಯುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅದು ಅವರಿಬ್ಬರ ನಡುವಿನ ವಿಚಾರ ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದರು.
ಕೇಂದ್ರ ನಾಯಕರು ಯತ್ನಾಳ್, ಜಾರಕಿಹೊಳಿ ಬಗ್ಗೆ ಗಮನ ಕೊಡುತ್ತಾರೆ. ಅವರೇ ತೀರ್ಮಾನಿಸುತ್ತಾರೆ ಎಂದು ಹೇಳಿದರು.