alex Certify ಡಾ. C.N ಮಂಜುನಾಥ್ ಗೆ ‘ಕರ್ನಾಟಕ ರತ್ನʼ ಘೋಷಿಸಿ: ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾ. C.N ಮಂಜುನಾಥ್ ಗೆ ‘ಕರ್ನಾಟಕ ರತ್ನʼ ಘೋಷಿಸಿ: ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಮನವಿ

ಬೆಂಗಳೂರು : ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿ ಇಂದು ನಿವೃತ್ತರಾಗಲಿರುವ ಡಾ.ಸಿ.ಎನ್.ಮಂಜುನಾಥ್ ಗೆ ಕರ್ನಾಟಕ ರತ್ನ  ನೀಡಿ ಗೌರವಿಸಬೇಕು ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯಗೆ  ಮನವಿ ಮಾಡಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಮನವಿ ಮಾಡಿರುವ ಅವರು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ.

ಬಡರೋಗಿಗಳ ಪಾಲಿನ ಆಶಾಕಿರಣವಾಗಿ “ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್” ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ. ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ. ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...