ಬೆಂಗಳೂರು: ಶಾಸಕರಿಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ. ಹಾಗಾಗಿ ಅವರು ಜನರ ಬಳಿ ಹೋಗುತ್ತಿಲ್ಲ. ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲಾ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸರ್ಕಾರದಲ್ಲಿ ಎಲ್ಲವೂ ಸರಿಯಿದೆ ಎನ್ನುವುದಾದರೆ ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ಸಭೆ ಮಾಡಿದ್ದು ಯಾಕೆ? ಪಕ್ಕದ ಮನೆಯಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನೇ ದೂರ ಇಟ್ಟದ್ದು ಯಾಕೆ? ಎಂದು ಪ್ರಶ್ನಿಸಿದರು.
ಸರ್ಕಾರವನ್ನು ನಾವು ಕೆಡವಲ್ಲ, ಸರ್ಕಾರ ಕೆಡವಲು ನಾವ್ಯಾರು? ಅವರ ನಡುವಿನ ಪರಸ್ಪರ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತೆ. ಹಿಂದೆಯೂ ಅವರ ಸರ್ಕಾರ ಹೀಗೆಯೇ ಬಿದ್ದು ಹೋಯಿತು ಎಂದು ಹೇಳಿದ್ದಾರೆ.
ಕಾವೇರಿ ಹೋರಾಟದಲ್ಲಿ ಜನರಿಗೆ ಮಾಡಿದ ಮೋಸ, ರಾಜ್ಯದ ಜನರು ಬರದಿಂದಾಗಿ ತತ್ತರಿಸುತ್ತಿದ್ದರೆ ಮಂತ್ರಿಗಳು ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿ ಕುಳಿತಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಟೀಂ ಮಾಡಿಕೊಂಡು ಸಭೆ ಮಾಡುತ್ತಿದ್ದಾರೆ. ವರ್ಗಾವಣೆ ದಂದೆಯಲ್ಲಿ ತೊಡಗಿದ್ದು 60% ಸರ್ಕಾರ ಎಂದು ಜನರೇ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.