alex Certify BIG NEWS: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಉಗ್ರರ ಕೈವಾಡ ಶಂಕೆ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು; ಆರ್.ಅಶೋಕ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಉಗ್ರರ ಕೈವಾಡ ಶಂಕೆ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು; ಆರ್.ಅಶೋಕ್ ಆಗ್ರಹ

ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರನಗರದ ನ್ಯಾಫಲ್ ಶಾಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರವಾದದ ಅರ್ಥದಲ್ಲಿ ಇ-ಮೇಲ್ ಬೆದರಿಕೆ ಹಾಕಿದ್ದಾರೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಧರ್ಮಾದಾರಿತ ಬಾಂಬ್ ಬೆದರಿಕೆ ಕರೆ ಹಾಕಿದ್ದಾರೆ. ಈ ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...