
ಬೆಂಗಳೂರು: ತೋಟಗಾರಿಕೆ ಇಲಾಖೆಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತರುವುದಾಗಿ ತೋಟಗಾರಿಕೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಯಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಹೊಸ ಯೋಜನೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೃಷಿ ಸಚಿವರೊಂದಿಗೆ ಚರ್ಚಿಸಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದ ಅವರು, ನಮ್ಮ ನಾಯಕರಾದ ಹೆಚ್. ವಿಶ್ವನಾಥ್ ಗೆ ಸಚಿವ ಸ್ಥಾನ ಕೈತಪ್ಪಿದ್ದು ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದ್ದಾರೆ.