ಕಾರವಾರ: ಕೊರೋನಾ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರಕ್ಕೆ ಅನುಭವದ ಕೊರತೆಯಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಕಿಡಿಕಾರಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಕಳೆದ ವರ್ಷದ ಪ್ಯಾಕೇಜ್ ಇನ್ನೂ ಸರಿಯಾಗಿ ತಲುಪಿಲ್ಲ. ಕರಾವಳಿ ಭಾಗದ ಮೀನುಗಾರರ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ದೂರಿದ್ದಾರೆ.
ವಿರೋಧ ಪಕ್ಷದವರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇಂತಹ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ. ರಾಜ್ಯ ಸರ್ಕಾರ ಜೀವಂತವಾಗಿಲ್ಲ ಎಂದು ಕಿಡಿಕಾರಿದ್ದಾರೆ.