ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ತುಂಬಾ ಮಹತ್ವದ್ದಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರು ಮೊಬೈಲ್ ಆ್ಯಪ್‍ದಲ್ಲಿಯೆ ಬೆಳೆ ಸಮೀಕ್ಷೆಯ ವಿವರಗಳನ್ನು ನಿಖರವಾಗಿ ದಾಖಲಿಸಬೇಕು.
ಬೆಳೆ ಸಮೀಕ್ಷೆಯ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ, ಬೆಳೆ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಫಲಾನುಭವಿಗಳ ಆಯ್ಕೆಗಾಗಿ ಬೆಳೆ ಸಮೀಕ್ಷೆ ವಿವರಗಳು ಅತೀ ಅವಶ್ಯವಾಗಿದೆ.
ಈ ಹಿನ್ನಲೆಯಲ್ಲಿ ರೈತರು ವಿಳಂಬ ಮಾಡದೇ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಖುದ್ದಾಗಿ ಆ್ಯಪ ಮೂಲಕ ನೋಂದಣಿ ಮಾಡಿಕೊಳ್ಳಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.