
ಮಂಡ್ಯ: ರಾಧಿಕಾ ಯಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಳಕೆರೆಯಲ್ಲಿ ಮಾತನಾಡಿದ ಅವರು, ಯಾರಪ್ಪ ಅವರೆಲ್ಲ. ಅದ್ಯಾರು ನನಗೆ ಗೊತ್ತಿದೆ ಎಂದು ಹೇಳಿದ್ದು, ನನಗೆ ಸಂಬಂಧಪಡದ ವಿಚಾರವನ್ನು ಕೇಳಬೇಡಿ ಎಂದು ತಿಳಿಸಿದ್ದಾರೆ.
ವಂಚಕ ಯುವರಾಜ್ ಜೊತೆಗೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಸಿದ್ದಾರೆ. ಈ ವಿಚಾರವಾಗಿ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಹೆಚ್.ಡಿ.ಕೆ., ಸಂಬಂಧಪಡದ ವಿಚಾರವನ್ನು ಕೇಳಬೇಡಿ ಎಂದು ತಿಳಿಸಿದ್ದಾರೆ.