SHOCKING: ನವೋದಯ ಶಾಲೆಯಲ್ಲಿ ರ್ಯಾಗಿಂಗ್: ಮರ್ಮಾಂಗಕ್ಕೆ ಒದ್ದು ವಿಕೃತಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ ಬಳಿ ಜವಾಹರ ನವೋದಯ ವಿದ್ಯಾಲಯದಲ್ಲಿ ರ್ಯಾಗಿಂಗ್ ಮಾಡಲಾಗಿದೆ.

ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಪಿಯುಸಿ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. 60ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕಟ್ಟಿಗೆ, ಬೆಲ್ಟ್ ನಿಂದ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಕೆಲವರಿಗೆ ಮರ್ಮಾಂಗಕ್ಕೆ ಒದ್ದು ವಿಕೃತಿ ಮೆರೆದ ಆರೋಪ ಕೇಳಿ ಬಂದಿದೆ.

ಆಗಸ್ಟ್ 20ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೋಷಕರಿಗೆ, ಶಿಕ್ಷಕರಿಗೆ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಹಲ್ಲೆ ಬಗ್ಗೆ ಶಾಲಾ ಸಿಬ್ಬಂದಿಗೆ ಹೇಳಿದರೂ, ಪ್ರಾಂಶುಪಾಲರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಪಿಯುಸಿ ವಿದ್ಯಾರ್ಥಿಗಳ ಪುಂಡಾಟಕ್ಕೆ ಕಡಿವಾಣ ಹಾಕದ ಆರೋಪ ಕೇಳಿ ಬಂದಿದೆ. ಹೀಗಾಗಿ ಪ್ರಾಂಶುಪಾಲರು ಸಿಬ್ಬಂದಿಯನ್ನು ಬದಲಾವಣೆ ಮಾಡುವಂತೆ ಆಗ್ರಹಿಸಲಾಗಿದೆ. ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಲು ಒತ್ತಾಯಿಸಲಾಗಿದೆ. ಇಲ್ಲದಿದ್ದರೆ ಶಾಲೆಯ ಮುಂದೆ ಧರಣಿ ನಡೆಸುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ. ಘಟನೆಯ ಬಗ್ಗೆ ಸಂಸದ ರಾಜಶೇಖರ ಹಿಟ್ನಾಳ್ ಅವರಿಗೆ ಪೋಷಕರು ದೂರು ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗೂ ಕೂಡ ದೂರು ನೀಡಲು ಪೋಷಕರು ಮುಂದಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read