![](https://kannadadunia.com/wp-content/uploads/2023/06/breaking-news-poster-design-template-d020bd02f944a333be71e17e3a38db24_screen-1.jpg)
ಕೊಟ್ಟಾಯಂ: ಕಿರಿಯ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ರ್ಯಾಗಿಂಗ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ನಲ್ಲಿ ಈ ಘಟನೆ ನಡೆದಿದೆ. 3ನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ರ್ಯಾಗಿಂಗ್ ಆರೋಪ ಕೇಳಿಬಂದಿದೆ. ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಕೈ-ಕಾಲು, ದೇಹದ ಹಲವೆಡೆ ಕೊಯ್ದು ಕೆಮಿಕಲ್ ಪೌಡರ್ ಹಾಕಿ ಅಮಾನುಷವಾಗಿ ನಡೆದುಕೊಂಡಿದ್ದಾರೆ.
ಕಿರಿಯ ವಿದ್ಯಾರ್ಥಿಗಳ ಕೈ-ಕಾಲು, ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ಪ್ರಕರಣ ಸಂಬಂಧ ಐವರು ಹಿರಿಯ ನರ್ಸಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.